BengaluruCrime

ಕೋಲಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು; ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಯೊಬ್ಬರಿಗೆ ಶಾಕ್‌ ನೀಡಿದ್ದಾರೆ. ಕೋಲಾರದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ. ವೆಂಕಟೇಶ್‌ ಅವರ ಮನೆ ಹಾಗೂ ಅವರಿಗೆ ಸಂಬಂಧಿದವರ ಮನೆಗಳ ಮೇಲೆ ದಾಳಿ ನಡೆದಿದೆ. ಬೆಳಗ್ಗೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ವೆಂಕಟೇಶ್‌ ಅವರು ಆದಾಯಕ್ಕಿಂದ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ. ಬೆಂಗಳೂರು, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಎಂಟು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಬೆಂಗಳೂರಿನ ವಿಜಯನಗರದಲ್ಲಿರುವ ಆರೋಪಿಯ ಮನೆ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಎಸ್‌ಪಿ ಕೆ.ವಿ. ಅಶೋಕ್‌ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ.

Share Post