BengaluruCrime

ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ; ಇಬ್ಬರ ದುರ್ಮರಣ

ಬೆಂಗಳೂರು; ನಿಂತಿದ್ದ ಕಲ್ಲಿನ ಲಾರಿಗೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ-ಕೋಲಾರ ಮಾರ್ಗದ ರಸ್ತೆಯಲ್ಲಿ ನಡೆದಿದೆ.

ಹೊಸಕೋಟೆ -ಕೋಲಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ ಬಳಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಂಜಾನೆ ಮೂರು ಗಂಟೆ ಸುಮಾರಿನಲ್ಲಿ ಈ ದುರಂತ ನಡೆದಿದೆ. ಬಸ್‌ ಕೋಲಾರದಿಂದ ಬೆಂಗಳೂರಿಗೆ ಬರಬೇಕಾದರೆ ಹೊಸಕೋಟೆ ಬಳಿ ಅಪಘಾತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

 

Share Post