Bengaluru

ದೇಗುಲ ಬಾಗಿಲಿಗೆ ಡಿಕ್ಕಿ; ಬೈಕ್‌ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು; ದೇವಸ್ಥಾನದ ಹೆಬ್ಬಾಗಿಲಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ  ನೆಲಮಂಗಲ ಸಮೀಪದ ಅಡಕಮಾರನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ಪರಿಣಾಮ ದೇಗುಲದ ಹೆಬ್ಬಾಗಿಲು ಕುಸಿದು, ಬೈಕ್ ಸವಾರನ ಮೇಲೆ ಬಿದ್ದಿದೆ. ಹೆಬ್ಬಾಗಿಲಿನ ಅವಶೇಷಗಳಡಿ ಸಿಲುಕಿದ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ನರಸಪ್ಪ ಬೈಕ್‌ನಲ್ಲಿ ಹೋಗುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ನರಸಪ್ಪ ಕೇವಲ 3 ದಿನಗಳ ಹಿಂದೆ ಕೂಲಿ ಅರಸಿ ಕುಟುಂಬ ಸಮೇತರಾಗಿ ಆಂಧ್ರಪ್ರದೇಶದಿಂದ ಅಡಕಮಾರನಹಳ್ಳಿಗೆ ಬಂದಿದ್ದರು. ಆದರೆ ಲಾರಿ ಚಾಲಕನ ನಿರ್ಲಕ್ಷ್ಯದಿಂದಾಗಿ ಹೆಬ್ಬಾಗಿಲು ಬೈಕ್ ಮೇಲೆ ಬಿದ್ದು, ನರಸಪ್ಪ ಬಲಿಯಾಗಿದ್ದಾನೆ.
Share Post