ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮಾಡಾಳ್‌ಗೆ ಸೂಚನೆ
ಬೆಂಗಳೂರು; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ ಕೊಡಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ನಿನ್ನೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ನಿನ್ನೆ ಮಾಡಾಳ್ ಅವರ ಪುತ್ರ ಪ್ರಶಾಂತ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು. ನಲವತ್ತು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಪ್ರಶಾಂತ್‌ರನ್ನು ಬಂಧಿಸಲಾಗಿತ್ತು. ಅನಂತರ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದಾಗಿ ಆರು ಕೋಟಿ ರೂಪಾಯಿ ನಗದು ಸಿಕ್ಕಿತ್ತು. ಇದರಿಂದಾಗಿ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂಜೆಯೊಳಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ.