ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ರಾಜೀನಾಮೆ
ಬೆಂಗಳೂರು; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ. ಸಂಜೆಯೊಳಗೆ ರಾಜೀನಾಮೆ ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿಗಮ ಮಂಡಳಿ ಸ್ಥಾನಕ್ಕೆ ಮಾಡಾಳ್ ಅವರು ರಾಜೀನಾಮೆ ನೀಡಿದ್ದಾರೆ. ಸಿಎಂ ಕಚೇರಿಯಲ್ಲಿ ಶಾಸಕ ಮಾಡಾಳ್ ಅವರು ರಾಜೀನಾಮೆ ನೀಡಿದ್ದಾರೆ. ಆಪ್ತರ ಮೂಲಕ ಮಾಡಾಳ್ ಅವರು ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ ಕೊಡಿಸುವುದಾಗಿ ಹೇಳಿ ಲಂಚ ಪಡೆದಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡಾಗಿ ಹಿಡಿದಿದ್ದರು. ನಿನ್ನೆ ನಡೆದ ದಾಳಿ ವೇಳೆ ಒಟ್ಟು ಎಂಟು ಕೋಡಿ ರೂಪಾಯಿ ಬಗದು ವಶಪಡಿಸಿಕೊಳ್ಳಲಾಗಿದೆ. ಇದರಿಂದಾಗಿ ಸರ್ಕಾರಕ್ಕೆ ಮುಜುಗರವಾಗಿದ್ದರಿಂದ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್‌ಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಡಾಳ್ ರಾಜೀನಾಮೆ ನೀಡಿದ್ದಾರೆ.
ನನ್ನ ಹಾಗೂ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ಲಂಚ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಆದ್ರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಶಾಸಕರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.