ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ; ಬೇಳೂರು
ಬೆಂಗಳೂರು; ಮಧುಬಂಗಾರಪ್ಪ ಹಾಗೂ ಬೇಳೂರು ಗೋಪಾಲಕೃಷ್ಣ ನಡುವಿನ ಸಮರ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಹರಿಹಾಯ್ದಿದ್ದಾರೆ. ಸಚಿವರಾದ ಮೇಲೆ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿಯಾಗಿಬಿಟ್ಟಿದೆ. ಅವರಿಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂಧು ಜರಿದಿದ್ದಾರೆ.
ನಾವು ಶಿವಮೊಗ್ಗದಲ್ಲಿ ಯಡಿಯೂರಪ್ಪ ಮಗ ರಾಘವೇಂದ್ರ ಅವರನ್ನು ಸೋಲಿಸಬೇಕು ಎಂದಿದ್ದೇವೆ. ಆದ್ರೆ ಸಚಿವ ಮಧು ಬಂಗಾರಪ್ಪ ನಮ್ಮಲ್ಲೇ ಒಡಕು ಮೂಡಿಸುತ್ತಿದ್ದಾರೆ. ನಾವು ಬಂಗಾರಪ್ಪ ಅವರ ಗರಡಿಯಲ್ಲಿ ಬೆಳೆದವರು, ಪಳಗಿದವರು. ನಾವು ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ಆದ್ರೆ ಒಟ್ಟಿಗೆ ಹೋಗಬೇಕಾದವರೇ ಪಕ್ಷವನ್ನು ಒಡೆಯುವುದಿಲ್ಲ ಎಂದು ಮಧು ಬಂಗಾರಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ಹರಿಹಾಯ್ದಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಎರೆಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳಬೇಕು ಎಂದಿದ್ದಾರೆ.