ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮದ್ ನಲಪಾಡ್ ಅಧಿಕಾರ ಸ್ವೀಕಾರ
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದಾರೆ. ಮಾತುಕತೆಯಂತೆ ರಕ್ಷಾ ರಾಮಯ್ಯ ಅವರ ಅಧಿಕಾರವಧಿ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ಮಹಮದ್ ನಲಪಾಡ್ ಅವರು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸರ್ವಧರ್ಮ ಪ್ರಾರ್ಥನೆ ಮೂಲಕ ನಲಪಾಡ್ ಯುವಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಆದ್ರೆ ಕೆಪಿಸಿಸಿ ಕಚೇರಿಯಲ್ಲಿ ಸಮಾರಂಭ ನಡೆಸಿ ಫೆಬ್ರವರಿ ೧೦ ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಾಗುತ್ತದೆ ಎಂದು ತಿಳಿದುಬಂದಿದೆ.