ಕಾವೇರಿ ವಿಚಾರವಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆ; ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ
ಬೆಂಗಳೂರು; ಕಾವೇರಿ ವಿಚಾರವಾಗಿ ನಾಳೆ ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕೆಆರ್‌ಎಸ್ ಅಆಣೆಕಟ್ಟೆ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ ಎಂದರು.
ಪ್ರತಿಭಟನೆ ಮಾಡೋದಕ್ಕೆ ಎಲ್ಲರಿಗೂ ಹಕ್ಕಿದೆ. ಆದ್ರೆ ಪ್ರತಿಭಟನೆಯನ್ನು ಶಾಂತಿಯುತವಾಗಿ ಮಾಡಬೇಕು. ಯಾವುದೇ ಕಾರಣಕ್ಕೂ ಅಹಿಕತ ಘಟನೆ ನಡೆಯಬಾರದು ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ಕೊಟ್ಟಿದ್ದಾರೆ. ಅಹಿತಕರ ಘಟನೆಗಳು ನಡೆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದೂ ಎಚ್ಚರಿಕೆ ನೀಡಿದ್ದಾರೆ.