BengaluruHealth

ಹೊಸ ವರ್ಷಾಚರಣೆಗೆ ಮಾಸ್ಕ್ ಕಡ್ಡಾಯದ ನಿಯಮ ಶೀಘ್ರ ಪ್ರಕಟ

ಬೆಂಗಳೂರು; ಕೊರೊನಾ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಒಂದಷ್ಟು ನಿಯಮಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡುತ್ತಿದೆ. ಅದರ ಭಾಗವಾಗಿ ಹೊಸ ವರ್ಷಾಚರಣೆ ವೇಳೆ ಮಾಸ್ಕ್‌ ಕಡ್ಡಾಯಗೊಳಿಸುವ ಬಗ್ಗೆ ಮೂರ್ನಾಲ್ಕು ದಿನಗಳ ತೀರ್ಮಾನ ಪ್ರಕಟಿಸಲಾಗುವುದು ಅಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಾಸ್ಕ್‌ ಕಡ್ಡಾಯ ಮಾಡುವ ಬಗ್ಗೆ ಸರ್ಕಾರ ಪರಿಶೀಲನೆ ಮಾಡುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ಹಿಂದೆ 2 ರಿಂದ 3 ಸಾವಿರ ಮಂದಿಗೆ ನಿತ್ಯ ಕೊವಿಡ್‌ ಪರೀಕ್ಷೆ ಮಾಡಲಾಗುತ್ತಿತ್ತು. ಈಗ ಬೆಂಗಳೂರಿನಲ್ಲಿ ಟೆಸ್ಟಂಗ್‌ ಪ್ರಮಾಣವನ್ನು ಹೆಚ್ಚಳ ಮಾಡುತ್ತಿದ್ದೇವೆ ಎಂದು ಸುಧಾಕರ್‌ ಹೇಳಿದ್ದಾರೆ.

Share Post