ಬಸ್ಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಕಡ್ಡಾಯ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು; ಕೇರಳದಲ್ಲಿ ಕೊವಿಡ್ ಆರ್ಭಟ ಜೋರಾಗಿದೆ. ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದೇ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸರ್ಕಾರದ ಮಾರ್ಗಸೂಚಿಯಂತೆ ಬಸ್ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದರು.
ಇನ್ನು ಕೇರಳದಲ್ಲಿ ಸೋಂಕು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೋಗುವ ಹಾಗೂ ಬರುವ ಬಸ್ಗಳಿಗೆ ಸ್ಯಾನಿಸೈಸರ್ ಸಿಂಪಡಿಸಲು ಸೂಚಿಸಲಾಗಿದೆ. ಸರ್ಕಾರದ ಆದೇಶವನ್ನು ಬಸ್ಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.