ಪ್ರಿಯಾಂಕ್ ಖರ್ಗೆ ಸಾಕ್ಷ್ಯಗಳನ್ನು ಒದಗಿಸಲಿ; ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ. ಇದೇ ವೇಳೆ ಶಾಸಕ ಪ್ರಿಯಾಂಕ್ ಖರ್ಗೆಯವರು ಆಡಿಯೋ ರಿಲೀಸ್ ಮಾಡಿದ್ದಾರೆ. ಅವರ ಬಳಿ ಏನು ಸಾಕ್ಷ್ಯಗಳಿವೆಯೋ ಅವನ್ನು ಸಿಐಡಿ ಅಧಿಕಾರಿಗಳಿಗೆ ನೀಡಬೇಕು. ಈ ಮೂಲಕ ನಿಷ್ಪಕ್ಷ ತನಿಖೆ ಮುಂದುವರಿಸಲು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವಕಾಶ ನೀಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನು ಪ್ರಕ್ರಿಯೆಗಳಿಗೆ ಒಳಪಡಿಸಲಾಗುತ್ತಿದೆ. ಇದರ ಹಿಂದೆ ಇರುವವರನ್ನೂ ಪತ್ತೆಹಚ್ಚಬೇಕು. ಇದಕ್ಕಾಗಿ ನಿಷ್ಪಕ್ಷವಾಗಿ ತನಿಖೆ ನಡೆಯುತ್ತಿದೆ. ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆರಗ ಜ್ಞಾನೇಂದ್ರ ಇದೇ ಸಂದರ್ಭದಲ್ಲಿ ತಿಳಿಸಿದರು. ಯಾವುದೇ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸದೇ, ಅಕ್ರಮ ಎಸಗಿದವರನ್ನು ಕಾನೂನಿಗೆ ಬಲೆಗೆ ತರಲು ಮುಂದಾಗಬೇಕು ಎಂದು ತಿಳಿಸಿದರು.