Bengaluru

ಹಾಲು ದರ ಲೀಟರ್‌ಗೆ 2 ರೂಪಾಯಿ ಏರಿಕೆ ಸಾಧ್ಯತೆ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌, ವಿದ್ಯುತ್‌ ದರ ಏರಿಕೆ ಬೆನ್ನಲ್ಲೇ ಹಾಲಿನ ದರವೂ ಏರಿಕೆಯಾಗುವ ಸಾಧ್ಯತೆ ಇದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕೆಎಂಎಫ್‌ ಎಂಡಿ ಸತೀಶ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಎಲ್ಲಾ ಹಾಲು ಒಕ್ಕೂಟಗಳಿಂದ ಲೀಟರ್‌ಗೆ 5 ರೂಪಾಯಿ ಏರಿಕೆ ಮಾಡುವಂತೆ ಬೇಡಿಕೆ ಬಂದಿದೆ. ಆದ್ರೆ, 2 ರೂಪಾಯಿ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.

Share Post