Bengaluru

ಸಿಎಂ ನಿವಾಸಕ್ಕೆ ಆನಂದ್‌ ಸಿಂಗ್‌ ಭೇಟಿ; ಕುತೂಹಲ ಕೆರಳಿಸಿದ ಚರ್ಚೆ

ಬೆಂಗಳೂರು: ಸಚಿವ ಆನಂದ್‌ ಸಿಂಗ್‌ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು. ಇತ್ತೀಚೆಗಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭೇಟಿಯಾಗಿದ್ದ ಆನಂದ್‌ ಸಿಂಗ್‌, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದರು. ಈ ಬೆನ್ನಲ್ಲೇ ಆನಂದ್‌ ಸಿಂಗ್‌ ಅವರು ಸಿಎಂ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದ ಆನಂದ್‌ ಸಿಂಗ್‌ ಅವರು, ಹಲವು ವಿಚಾರಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದರು ಎಂದು ತಿಳಿದುಬಂದಿದೆ. ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸಿದ್ದಕ್ಕೆ ಆನಂದ್‌ ಸಿಂಗ್‌ ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್‌ ಸೇರಲು ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಅವರು ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ.

Share Post