Bengaluru

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಲ್ಲಾ ಸುಳ್ಳು ಹೇಳ್ತಾರೆ; ಸಚಿವ ಕೆ.ಎಸ್‌.ಈಶ್ವರಪ್ಪ

ಬೆಂಗಳೂರು: ಶಿವಮೊಗ್ಗದ ಶಾಲೆಯಲ್ಲಿ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ಅಲ್ಲಿ ರಾಷ್ಟ್ರಧ್ವಜ ಇರಲೇ ಇಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಬಳಿ ಮಾತನಾಡಿದ ಅವರು,  ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇಬ್ಬರೂ ಹೇಳಿದ್ದಾರೆ. ಆ ಶಾಲೆಯಲ್ಲಿ ಕಂಬದಲ್ಲಿ ರಾಷ್ಟ್ರಧ್ವಜ ಇರಲಿಲ್ಲ ಅಂತ. ಆದ್ರೆ ಡಿ.ಕೆ.ಶಿವಕುಮಾರ್‌ ಸುಳ್ಳನ್ನು ಹೇಳಿದ್ದಾರೆ. ಇನ್ನು ವಿಧಾನಸಭೆಯಲ್ಲಿ ಧರಣಿ ವೇಳೆ ಕಾಂಗ್ರೆಸ್‌ ನಾಯಕರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ.

ಹೀಗಾಗಿ ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡುತ್ತೇನೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

 

 

Share Post