ಬೊಮ್ಮಾಯಿಯವರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿದ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು; ಹೊಸ ಸರ್ಕಾರ ರಚನೆಯಾಗಿ ಎರಡು ತಿಂಗಳಾದರೂ ವಿಪಕ್ಷ ನಾಯಕನ ಆಯ್ಕೆ ನಡೆದಿಲ್ಲ. ಬಿಜೆಪಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ನಾಯಕರು ವಿಪಕ್ಷ ನಾಯಕ ಸ್ಥಾನಕ್ಕಾಗಿ ಸರ್ಕಸ್ ನಡೆಸುತ್ತಿದ್ದಾರೆ. ಆದ್ರೆ ಬಿಜೆಪಿ ಹೈಕಮಾಂಡ್‌ಗೆ ಮಾತ್ರ ಸೂಕ್ತ ನಾಯಕನನ್ನು ಆಯ್ಕೆ ಮಾಡೋದಕ್ಕೆ ಆಗುತ್ತಿಲ್ಲ. ಈ ನಡುವೆ ಜೆಡಿಎಸ್ ನಾಯಕ ಕುಮಾರಸ್ವಾಮಿಯವರನ್ನು ವಿಪಕ್ಷ ನಾಯಕ ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ್ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರ ಕಾಲೆಳೆದಿದ್ದಾರೆ.
ಶೀಘ್ರದಲ್ಲೇ ಹೆಚ್.ಡಿ.ಕುಮಾರಸ್ವಾಮಿಯವರು ವಿಪಕ್ಷ ನಾಯಕರಾಗಲಿದ್ದು. ಅವರಿಗೆ ಅಭಿನಂದನೆಗಳು. ಮಾಜಿ ಸಿಎಂ ಬೊಮ್ಮಾಯಿಯವರು ಇನ್ನು ಕಾಂಗ್ರೆಸ್ ಪಕ್ಷ ಸೇರೋ ಬಗ್ಗೆ ಯೋಚನೆ ಮಾಡಬೇಕು ಎಂದು ಕಾಲೆಳೆದಿದ್ದಾರೆ.