Bengaluru

ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವವರಿಗೆ 24 ಗಂಟೆಯೊಳಗೆ ಅಗತ್ಯ ‌ಸೌಲಭ್ಯ: ಸಚಿವ ನಿರಾಣಿ

ಬೆಂಗಳೂರು: ರಾಜ್ಯದ ಯಾವುದೇ ಭಾಗಗಳಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳು ಮುಂದೆ ಬಂದರೆ , 24 ಗಂಟೆಯೊಳಗೆ ಜಮೀನು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ದವಾಗಿದೆ ಎಂದು ಸಚಿವ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಗೆ ಹೇಳಿದರು.

ಶಾಸಕ ಯಶವಂತರಾಯವಿಠಲಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಕೈಗಾರಿಕೆಗಳನ್ನ ಸಮಗ್ರವಾಗಿ ಅಭಿವೃದ್ದಿಪಡಿಸಲು ಸರ್ಕಾರ ಬದ್ದವಾಗಿದೆ. ರಾಜ್ಯದಲ್ಲಿ ಯಾವುದೇ ಭಾಗದಲ್ಲಿ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬಂದರೆ ಎಲ್ಲ ರೀತಿಯ ಸೌಕರ್ಯವನ್ನು ಕಲ್ಪಿಸಿಕೊಡಲು ಸಿದ್ದ ಎಂದು ತಿಳಿಸಿದರು.

ಸಮಗ್ರ ಕೈಗಾರಿಕೆ ಅಭಿವೃದ್ದಿಗಾಗಿ ಪ್ರತಿ ಜಿಲ್ಲೆಯಲ್ಲೂ ಒಂದು ಸಾವಿರ ಎಕರೆ ಹಾಗೂ ತಾಲ್ಲೂಕು ಮಟ್ಟದಲ್ಲಿ 100 ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿಯೇ ಮೀಸಲಿಡಲು ತೀರ್ಮಾನಿಸಿದ್ದೇವೆ  ವಾರದೊಳಗೆ ಅಧಿಸೂಚನೆ ರಾಮನಗರ ಜಿಲ್ಲೆ ಮಾಗಡಿ ನಗರದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ ವತಿಯಿಂದ ಕೈಗಾರಿಕಾ ವಲಯ ಸ್ಥಾಪನೆ ಮಾಡಲು ಒಂದು ವಾರದೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು.

Share Post