ಬೆಂಗಳೂರು; ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸಕ್ಕೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನ ಪದ್ಮನಾಭನಗರದ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವರು ದೇವೇಗೌಡರ ಆರೋಗ್ಯ ವಿಚಾರಿಸಿದರು. ಈ ವೇಳೆ ಗೌಡರು ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಇಬ್ಬರ ಭೇಟಿ ಈಗ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
