ಶಾಸಕ ಮಾಡಾಳ್ ಏಪ್ರಿಲ್ 1ರವರೆಗೆ ಪೊಲೀಸ್ ಕಸ್ಟಡಿಗೆ
ಬೆಂಗಳೂರು; ಲಂಚ ಪ್ರಕರಣದಲ್ಲಿ ನಿನ್ನೆ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ನಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಮಾಡಿಕೊಂಡಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರ ಮನವಿಯನ್ನು ಪುರಸ್ಕರಿಸಿದೆ.
ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಏಪ್ರಿಲ್ ೧ರವೆರಗೆ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇದರಿಂದಾಗಿ ಶಾಸಕರು ಏಪ್ರಿಲ್ 1 ರವೆರಗೆ ಲೋಕಾಯುಕ್ತ ಪೊಲೀಸರ ಕಸ್ಟಡಿಯಲ್ಲಿದ್ದು, ವಿಚಾರಣೆ ಎದುರಿಸಬೇಕಾಗಿದೆ.