ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್; ಲೋಕಾಯುಕ್ತ ಪೊಲೀಸರಿಂದ ವಿಚಾರಣೆ
ಬೆಂಗಳೂರು; ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಬಂಧನವಾಗಿದೆ. ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಕಳೆದ ರಾತ್ರಿ ಮಾಡಾಳ್ ವಿರೂಪಕಾಕ್ಷಪ್ಪರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಿಂದ ಇನ್ನೋವಾ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಇದರ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಕ್ಯಾತ್ಸಂದ್ರ ಟೋಲ್ ಬಳಿ ಅವರನ್ನು ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷರನ್ನ ಪೊಲೀಸರು ಬಂಧಿಸಿದ್ದಾರೆ.