BengaluruNationalPolitics

ಡಿಸೆಂಬರ್‌ 6ಕ್ಕೆ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ

ಡಿಸೆಂಬರ್‌ ೬ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರಿನ ಜ್ಞಾನ ಭಾರತಿ ಕ್ಯಾಂಪಸ್‌ನಲ್ಲಿ ನಿರ್ಮಿಸಿರುವ ಕಾನೂನು ಕಾಲೇಜು ಕಟ್ಟಡ ಹಾಗೂ ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ಕಟ್ಟಡವನ್ನು ಪ್ರಧಾನಿ ಉದ್ಘಾಟನೆ ಮಾಡಲಿದ್ದಾರೆ.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಹಾಗೂ ಕಾನೂನು ಕಾಲೇಜು ಕಟ್ಟಡ ಉದ್ಘಾಟನೆ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವರಾದ ಅಶ್ವಥ್ ನಾರಾಯಣ್ ಹಾಗೂ ವಿ.ಸೋಮಣ್ಣ ಅವ್ರು ಬುಧವಾರ, ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯ ಸರ್ಕಾರದ ಬೆಂಗಳೂರಿನ ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗೂ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. 2016ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಸತಿ ಯೋಜನೆಗೆ ಚಾಲನೆ ನೀಡಿದ್ದರು. ನಗರದ ಬಡವರಿಗೆ 1 ಲಕ್ಷ ಮನೆ ನಿರ್ಮಿಸಿಕೊಡುವ ಉದ್ದೇಶವನ್ನು ಹೊಂದಲಾಗಿತ್ತು. 2018ರಲ್ಲಿ ಮನೆಗಳ ನಿರ್ಮಾಣಕ್ಕೆ ಸರ್ಕಾರ ಟೆಂಡರ್ ಕರೆದಿತ್ತು. ಆದರೆ, ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ಅಧಿಕಾರಿಗಳಿಗೆ ಕಷ್ಟಕರವಾಗಿದ್ದರಿಂದ ಯೋಜನೆ ನೆನೆಗುದಿಗೆ ಬಿದ್ದಿತ್ತು.

2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕದ ಬೇರೆ ನಗರಗಳಿಗೆ ಸಹ ಯೋಜನೆಯನ್ನು ವಿಸ್ತರಿಸಿದ್ದರು. ಆದರೆ ಅದು ಪ್ರಗತಿ ಹೊಂದಿರಲಿಲ್ಲ. ನಂತರ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಯೋಜನೆಗೆ ಮತ್ತೆ ಚಾಲನೆ ನೀಡಿದರು.

 

Share Post