BengaluruPolitics

ಮೋದಿ ಸರ್ಕಾರದ ಸುಳ್ಳುಗಳ ಸಂಭ್ರಮ; ಇನ್ನೂ ಕರಾಳ ದಿನಗಳು ಕಾದಿದೆ ಎಂದ ಸಿದ್ದರಾಮುಉ

ಬೆಂಗಳೂರು; ಆರ್ಥಿಕತೆ ನಿಭಾಯಿಸುವುದು ಹೇಗೆ ಎಂದು ಅಮೆರಿಕದಂತಹ ದೇಶಗಳಿಗೂ ಹೇಳಿಕೊಟ್ಟು ಮನಮೋಹನ್‌ ಸಿಂಗ್‌ ಅವರು ತಲೆ ಎತ್ತಿ ನಿಲ್ಲುವಂತೆ ಮಾಡಿದ್ದ ಭಾರತದ ಆರ್ಥಿಕತೆಯನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ಕಾರ ತಲೆತಗ್ಗಿಸುವಂತೆ ಮಾಡಿದೆ. ಇದೇ ಅವರ ಎಂಟು ವರ್ಷಗಳ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

 

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂಟು ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದಿಂದಾಗಿ ದೇಶ ಹಾಳಾಗಿದ್ದು, ದೇಶಕ್ಕೆ ಮುಂದೆ ಇನ್ನೂ ಕರಾಳ ದಿನಗಳು ಕಾದಿವೆ ಎಂದು ಹೇಳಿದ್ದಾರೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಆಗಿದ್ದು 8 ವರ್ಷ. ಆದರೆ ದೇಶದ ಅಭಿವೃದ್ಧಿ ಮಾತ್ರ 20 ವರ್ಷ ಹಿಂದಕ್ಕೆ ಕುಸಿದಿದೆ. ದೇಶ ವಿಶ್ವಗುರುವಾಗುವ ಬದಲು ಪಾತಾಳದತ್ತ ಕುಸಿಯುತ್ತಿದೆ. ಇದನ್ನು ನಾನು ಸೃಷ್ಟಿಸಿಕೊಂಡು ಹೇಳುತ್ತಿಲ್ಲ. ಸರ್ಕಾರದ ದಾಖಲೆಗಳೇ ಹೇಳುತ್ತಿವೆ ಎಂದಿದ್ದಾರೆ.

 

ದೇಶ ಹಿಂದೆಂದೂ ಇಲ್ಲದಷ್ಟು ಸಾಲದ ಸುಳಿಗೆ ಸಿಲುಕಿದೆ. ರೂಪಾಯಿಯ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ. ಬೆಲೆ ಏರಿಕೆಯು ಹಿಂದೆಂದೂ ಇಲ್ಲದ ಮಟ್ಟಕ್ಕೆ ಮುಟ್ಟಿದೆ. ಹಣದುಬ್ಬರ ಕಳೆದ 17 ವರ್ಷಗಳಲ್ಲಿ ತೀವ್ರಗತಿಗೆ ಮುಟ್ಟಿದೆ. ನಿರುದ್ಯೋಗ ತಾರಕಕ್ಕೇರಿದೆ. ರಾಜ್ಯಗಳ ಆರ್ಥಿಕತೆ ಕುಸಿದು ಹೋಗುತ್ತಿದೆ. ಒಕ್ಕೂಟ ವ್ಯವಸ್ಥೆ ಶಿಥಿಲವಾಗುತ್ತಿದೆ. ಇದರ ಜೊತೆಯಲ್ಲಿ ದೇಶದ ಪ್ರಜಾತಾಂತ್ರಿಕೆಯೂ ಭಯಭೀತವಾಗಿದೆ.ಡಿ ಮಾನಿಟೈಸೇಷನ್- ಜಿಎಸ್‍ಟಿ ವ್ಯವಸ್ಥೆ, ಕೊರೋನ ಸಾಂಕ್ರಾಮಿಕದ ಎಡಬಿಡಂಗಿ ನಿರ್ವಹಣೆಗಳು ದೇಶದ ಬೆನ್ನುಮೂಳೆಯನ್ನು ಟೊಳ್ಳು ಮಾಡಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

Share Post