ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿರೋದೇ ಮೋದಿ; ಸಿದ್ದರಾಮಯ್ಯ
ಬೆಂಗಳೂರು; ನಾವು ಕೊಟ್ಟಿರುವ ಗ್ಯಾರೆಂಟಿಗಳನ್ನು ಜಾರಿಗೆ ತಂದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಮೋದಿಯವರು ಹೇಳಿದ್ದಾರೆ. ಆದ್ರೆ ದೇಶವನ್ನು ದಿವಾಳಿ ಮಾಡಿದ್ದೇ ಪ್ರಧಾನಿ ಮೋದಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕೊಟ್ಟ ಭರವಸೆಗಳನ್ನು ಮೊದಲ ಕ್ಯಾಬಿನೆಟ್ನಲ್ಲೇ ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಕರ್ನಾಟಕಕ್ಕೆ ಕಳಂಕ ತಂದಿದ್ದಾರೆ. ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಇಷ್ಟು ದಿನ ರಾಜ್ಯದಲ್ಲಿಮ ಸರ್ಕಾರ ನಿಷ್ಕ್ರಿಯವಾಗಿತ್ತು. ಈಗ ನಾವು ಉತ್ತಮ ಆಡಳಿತ ನೀಡಲಿದ್ದೇವೆ. ಜನಪರವಾಗಿ ಕೆಲಸ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.