Bengaluru

ಪ್ರಧಾನಿ ದೂರದೃಷ್ಟಿಯ ಯೋಜನೆಗಳನ್ನು ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿ ಮಹತ್ವಾಕಾಂಕ್ಷಿ ಯೋಜನೆಗಳನ್ನು ನಮಗೆ ಕೊಡುಗೆಯಾಗಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಕೊಮ್ಮಘಟ್ಟದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮಾತನಾಡಿದ ಅವರು, ಕೇಂದ್ರ ನೆರವಿನಿಂದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಪ್ರಧಾನಿ ಮೋದಿಯವರು ಎರಡು ದಿನ ರಾಜ್ಯ ಪ್ರವಾಸ ಕೈಗೊಂಡು ಹಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದು, ಇದು ಸವರ್ಣಾಕ್ಷರಗಳಲ್ಲಿ ಬರೆದಿಡುವ ದಿನ ಎಂದು ಹೇಳಿದರು.

ಪ್ರಧಾನಿಯವರು ಕರ್ನಾಟಕಕ್ಕೆ ನೆರವಿನ ಹಸ್ತ ನೀಡಿದ್ದಾರೆ. ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಹಣ ನೀಡಲಾಗಿದೆ. ಸಬ್‌ ಅರ್ಬನ್‌ ರೈಲು ಯೋಜನೆಗೆ ಚಾಲನೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ನಾಲ್ಕು ಸ್ಯಾಟಲೈಟ್‌ ಟೌನ್‌ಗಳಿಗೆ ಇದು ಸಂಪರ್ಕ ಕಲ್ಪಿಸಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇನ್ನು ಇದೇ ವೇಳೆ ಸಿಎಂ ಬೊಮ್ಮಾಯಿಯವರು ರಾಜ್ಯ ಸರ್ಕಾರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು ಸನ್ಮಾನಿಸಿದರು. ಪ್ರಧಾನಿಗೆ ಬೆಳ್ಳಿಯ ಕಾಮಧೇನು ನೀಡಿ, ಮೈಸೂರು ಪೇಟ ತೊಡಿಸಿ ಗೌರವಿಸಲಾಗಯಿತು

Share Post