BengaluruCrimePolitics

ಹಾವೇರಿಯಲ್ಲಿ ನೈತಿಕ ಪೊಲೀಸ್‌ಗಿರಿ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡನೆ

ಬೆಂಗಳೂರು; ಹಾವೇರಿ ಜಿಲ್ಲೆ ಹಾನಗಲ್‌ ಪಟ್ಟಣದ ವಸತಿಗೃಹದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಪುಂಡರ ಈ ಕೃತ್ಯವನ್ನು ಖಂಡಿಸುತ್ತೇನೆ ಎಂದಿದ್ದಾರೆ.

ನೈತಿಕ ಪೊಲೀಸ್‌ಗಿರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಪುಂಖಾನುಪುಂಖವಾಗಿ ಮಾತನಾಡುತ್ತಿದ್ದರು. ಆದ್ರೆ ಹಾವೇರಿಯಲ್ಲಿ ಇಂತಹ ಹೀನ ಕೃತ್ಯ ನಡೆದರೂ ಸಿದ್ದರಾಮಯ್ಯ ಮೌನವಾಗಿರುವುದೇಕೆ ಎಂದು ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ. ದೌರ್ಜನ್ಯ ಮಾಡಿರುವ ಕಿರಾತಕರು ಅಲ್ಪ ಸಂಖ್ಯಾತರು ಅನ್ನುವ ಕಾರಣಕ್ಕೆ ದಿವ್ಯ ಮೌನ ವಹಿಸಿದ್ದಾರಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಲಿ ಎಂದೂ ಆಗ್ರಹಿಸಿದ್ದಾರೆ.

ಅಮಾಯಕರ ಮೇಲೆ ನೈತಿಕ ಪೋಲಿಸ್ ಗಿರಿ ನಡೆಸಿರುವ ಗೂಂಡಾಗಳನ್ನು ಬಂಧಿಸಬೇಕು. ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಯುವತಿಯ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಇದೆ. ಇದನ್ನು ನೋಡಿದರೆ ರಾಜ್ಯದಲ್ಲಿ ಸರ್ಕಾರ ಜೀವಂತ ಇದೆಯೋ, ಇಲ್ಲವೋ ಎನ್ನುವಂತಾಗಿದೆ ಎಂದೂ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

 

Share Post