ಸಿನಿಮಾ ಆಗಲಿದೆ ʻಪರ್ವʼ ಕಾದಂಬರಿ; ವಿವೇಕ್ ಅಗ್ನಿಹೋತ್ರಿ ನಿರ್ದೇಶನ
ಬೆಂಗಳೂರು; ದಿ ಕಾಶ್ಮೀರ್ ಫೈಲ್ಸ್, ದಿ ವ್ಯಾಕ್ಸಿನ್ ವಾರ್ ಚಿತ್ರಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಮತ್ತೊಂದು ಸಿನಿಮಾ ಮಾಡುತ್ತಿದ್ದಾರೆ. ನಮ್ಮ ಕನ್ನಡದ ಲೇಖಕ ಎಸ್.ಎಲ್.ಭೈರಪ್ಪ ಅವರ ಪರ್ವ ಕಾದಂಬರಿ ಆಧರಿಸಿ ಅವರು ಸಿನಿಮಾ ಮಾಡುತ್ತಿದ್ದಾರೆ. ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಅವರೇ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ವರ್ಷದ ಹಿಂದೆಯೇ ಪ್ರಕಾಶ್ ಬೆಳವಾಡಿ ನನಗೆ ಕರೆ ಮಾಡಿ ಪರ್ವ ಕಾದಂಬರಿ ಬಗ್ಗೆ ಮಾತನಾಡಿದ್ದರು. ಭೈರಪ್ಪ ಅವರ ಜೊತೆ ಈ ಬಗ್ಗೆ ಮಾತುಕತೆ ನಡೆಸುವಂತೆ ಸೂಚನೆ ಕೊಟ್ಟಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿದ ಮೇಲೆ ಅವರು ಪರ್ವ ಕಾದಂಬರಿಯನ್ನು ಸಿನಿಮಾ ಮಾಡುವಂತೆ ಸಲಹೆ ಕೊಟ್ಟಿದ್ದರು. ಅದರಂತೆ ನಾನು ಪರ್ವ ಸಿನಿಮಾ ಮಾಡುತ್ತಿದ್ದೇನೆ. ಮಹಾಭಾರತದಲ್ಲಿ ನಾವು ಕೇಳದ ವಿಷಯಗಳು ಇದರಲ್ಲಿವೆ. ಮೂರು ಭಾಗಗಳಲ್ಲಿ ಈ ಸಿನಿಮಾ ಬರಲಿದೆ ಎಂದು ವಿವೇಕ್ ಅಗ್ನಿಹೋತ್ರಿ ಹೇಳಿದರು.
ಲೇಖಕ ಎಸ್.ಎಲ್. ಭೈರಪ್ಪ ಮಾತನಾಡಿ, ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಅನುಭವವಿದ್ದು, ಅವರ ಸಿನಿಮಾಗಳೂ ಸಾಕಷ್ಟು ಹೆಸರು ಮಾಡಿವೆ. ಪರ್ವವನ್ನು ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಸಿನಿಮಾ ಮಾಡಬೇಕು. ನಿಜವಾದ ಮಹಾಭಾರತ ಏನು ಅನ್ನೋದನ್ನು ತೋರಿಸಬಹುದು. ಸಿನಿಮಾ ಮಾಡಲು ನನ್ನ ಒಪ್ಪಿಗೆ ಇದೆ ಎಂದರು.