BengaluruPolitics

ಮುಡಾ ಹಗರಣ; ನಾಯಕರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದ್ದೇನು..?

ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಈ ಬೆನ್ನಲ್ಲೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದೆ.. ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿವೆ..

ಇದನ್ನೂ ಓದಿ; ಮುಡಾ ಪ್ರಕರಣ; ಸಿಎಂ ವಿರುದ್ಧ ತನಿಖೆ ಹೇಗೆ ನಡೆಯುತ್ತೆ..?

ಹೀಗಿರುವಾಗಲೇ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರು ರಾಜ್ಯದ ನಾಯಕರಿಗೆ ಕರೆ ಮಾಡಿ ಕೆಲವು ಮಹತ್ವದ ಸೂಚನೆಗಳನ್ನು ಕೊಟ್ಟಿದ್ದಾರೆ.. ಹೀಗಾಗಿ, ರಾಜ್ಯ ರಾಜಕೀಯ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ..
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಗೊತ್ತಾಗುತ್ತಿದ್ದಂತೆ ಹೈಕಮಾಂಡ್‌ ನಾಯಕರಾದ ವೇಣುಗೋಪಾಲ್‌ ಹಾಗೂ ರಣದೀಪ್‌ ಸುರ್ಜೇವಾಲಾ ಅವರು ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರ ಜೊತೆ ಮಾತನಾಡಿದ್ದಾರೆ.. ಧೈರ್ಯ ಕಳೆದುಕೊಳ್ಳದಂತೆ ಸಿಎಂ ಸಿದ್ದರಾಮಯ್ಯಗೆ ಹೇಳಿದ್ದಾರೆ.. ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ ಎನ್ನಲಾಗಿದೆ..

ಇದನ್ನೂ ಓದಿ; ಸಿಎಂಗೆ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ; ಜಗದೀಶ್‌ ಶೆಟ್ಟರ್‌

ಇನ್ನು ಇದರ ವಿರುದ್ಧ ಹೋರಾಟಕ್ಕೆ ಸಜ್ಜಾಗಬೇಕು. ರಾಜ್ಯಾದ್ಯಂತ ಹೋರಾಟ ನಡೆಸಬೇಕು. ಕಾಂಗ್ರೆಸ್‌ನ ಎಲ್ಲಾ ಸಚಿವರು, ಶಾಸಕರು ಹೇಳಿಕೆಗಳನ್ನು ನೀಡಬೇಕು.. ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ..

ಇದನ್ನೂ ಓದಿ; Breaking; ಸಂಜೆ ನಡೆಯಬೇಕಿದ್ದ ಸಂಪುಟ ಸಭೆ ರದ್ದು!

ಈ ಬೆನ್ನಲ್ಲೇ ಹೈಕಮಾಂಡ್‌ ಸೂಚನೆಯಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕೆಲವೇ ಕ್ಷಣಗಳಲ್ಲಿ ಸಚಿವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.. ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲನೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.. ಇನ್ನು ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೋರಾಟ ನಡೆಸುವುದು, ರಾಜ್ಯಪಾಲರ ನಡೆ ಹಾಗೂ ಬಿಜೆಪಿ, ಜೆಡಿಎಸ್‌ ಷಡ್ಯಂತ್ರವನ್ನು ಖಂಡಿಸುವುದಕ್ಕೆ ಕಾಂಗ್ರೆಸ್‌ ಸಿದ್ಧತೆ ಮಾಡಿಕೊಳ್ಳುತ್ತಿದೆ..

Share Post