ಹಾಡಹಗಲೇ ನಿವೃತ್ತ ಸೇನಾ ಸಿಬ್ಬಂದಿಯ ಬರ್ಬರ ಹತ್ಯೆ
ಬೆಂಗಳೂರು: ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತಿಯಾಗಿದ್ದ, ಸುರೇಶ್ ಎಂಬುವವರನ್ನು ಹಾಡ ಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮನೆಗೆ ನುಗ್ಗಿ ಹಂತಕರು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಮ್ಮಲೂರಿನ ಗೌತಮ್ ನಗರದಲ್ಲಿ ಸುರೇಶ್ ವಾಸವಾಗಿದ್ದರು. ಮಧ್ಯಾಹ್ನ ಮನೆಯಲ್ಲಿರುವಾಗ ಆರೋಪಿಗಳು ಮನೆ ಹಿಂಬಾಗಿಲಿನಿಂದ ನುಗ್ಗಿದ್ದಾರೆ. ಬಳಿಕ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಖಾರದಪುಡಿ ಎರಚಿ ಸುಳಿವು ಸಿಗದ ಹಾಗೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ ರಾವ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.