BengaluruDistricts

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ

ಬೆಳಗಾವಿ: ವರ್ಷಗಳು ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನನ್ನು ವಾಪಸ್ ಪಡೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಹೇಳಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಮಿ ಹಂಚಿಕೆಯಾಗಿ 5ರಿಂದ 20 ವರ್ಷ ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ ಭೂಮಿಯನ್ನು ವಾಪಸ್ ಪಡೆಯಲಾಗುವುದು. ಈಗಾಗಲೇ ಅವುಗಳನ್ನು ಗುರುತಿಸಲಾಗಿದೆ ಎಂದರು.
ಕಾರ್ಖಾನೆ ಪೂರ್ಣವಾಗಿ ಪ್ರಾರಂಭಿಸದಿದ್ದರೆ ಸೇಲ್ ಡೀಡ್ ಮಾಡಿಕೊಡುವುದಿಲ್ಲ. ಸೇಲ್ ಡೀಡ್ ಆಗದೆ ಅವರು ಕೈಗಾರಿಕಾ ಭೂಮಿಯನ್ನು ರಿಯಲ್ ಎಸ್ಟೇಟ್‍ಗೆ ಬಳಸಿಕೊಳ್ಳಲು ಅವಕಾಶವಿಲ್ಲ. ಕೈಗಾರಿಕೆಗೆ ಹಂಚಿಕೆಯಾದ ಜಮೀನಿನಲ್ಲಿ ಶೇ.15ರಷ್ಟು ವಸತಿಗೆ ಮೀಸಲಿಡಬೇಕು ಎಂದರು.

 

Share Post