BengaluruEconomy

ನಂದಿನಿ ಹಾಲಿನ ದರ ಲೀಟರ್‌ಗೆ 3 ರೂ. ಹೆಚ್ಚಳ; ನಾಳೆಯಿಂದಲೇ ಜಾರಿ

ಬೆಂಗಳೂರು; ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ನಂದಿನಿ ಹಾಲಿನ ದರ ಲೀಟರ್‌ಗೆ ಮೂರು ರೂಪಾಯಿ ಹಾಗೂ ಮೊಸರಿನ ದರ ಲೀಟರ್‌ಗೆ ಮೂರು ರೂಪಾಯಿ ಏರಿಕೆ ಮಾಡಲಾಗಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

ಈಗಾಗಲೇ ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಈ ನಡುವೆ ಸರ್ಕಾರ ಹಾಲು, ಮೊಸರಿನ ಬೆಲೆಯೂ ಏರಿಕೆ ಮಾಡಿ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.

Share Post