BengaluruScienceTechnology

ಶನಿವಾರ ಬೆಂಗಳೂರಿಗೆ ನರೇಂದ್ರ ಮೋದಿ; ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ

ಬೆಂಗಳೂರು; ಚಂದ್ರಯಾನ-೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಡೀ ದೇಶವೇ ಸಂಭ್ರಮಿಸುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಕೂಡಾ ನಿನ್ನೆ ದಕ್ಷಿಣಾಫ್ರಿಕಾದಿಂದಲೇ ಮಾತನಾಡಿ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದರು. ಇದೀಗ ಅವರು ಶನಿವಾರ ಬೆಂಗಳೂರಿಗೆ ಭೇಟಿ ಕೊಟ್ಟು, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. 

ಜೋಹಾನ್ಸ್‌ ಬರ್ಗ್‌ನಲ್ಲಿ ನಡೆಯುತ್ತಿರುವ ಶೃಂಗಸಭೆ ಮುಗಿದ ನಂತರ ಅವರು ನೇರವಾಗಿ ಬೆಂಗಳೂರಿಗೆ ಬರಲಿದ್ದಾರೆ. ಶನಿವಾರ ಸಂಜೆ 5.55ಕ್ಕೆ ಎಚ್​ಎಎಲ್​ ಏರ್‌ಪೋರ್ಟ್‌ಗೆ ಮೋದಿ ಆಗಮಿಸಲಿದ್ದಾರೆ. ಸಂಜೆ 6.30ರವರೆಗೆ ಅಲ್ಲೇ ವಿಶ್ರಾಂತಿ ಪಡೆದು ನಂತರ ರಾತ್ರಿ 7 ಗಂಟೆಗೆ ಇಸ್ರೋ ಕೇಂದ್ರ ಕಚೇರಿಗೆ ಭೇಟಿ ನೀಡಲಿದ್ದಾರೆ. ರಾತ್ರಿ 8 ಗಂಟೆಯವರೆಗೆ ಇಸ್ರೋ ಕಚೇರಿಯಲ್ಲಿ ಸಭೆ ನಡೆಸಲಿದ್ದು, ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಲಿದ್ದಾರೆ.

ಇದಕ್ಕೂ ಮೊದಲು ಅವರು ಪೀಣ್ಯದಲ್ಲಿ ಒಂದು ಕಿಲೋ ಮೀಟರ್‌ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ನಂತರ   ರಾತ್ರಿ 8.35ಕ್ಕೆ ಬೆಂಗಳೂರಿನಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.

 

Share Post