BengaluruPolitics

ನಾಳೆ ರಾಜ್ಯಕ್ಕೆ ನರೇಂದ್ರ ಮೋದಿ; ದಾವಣಗೆರೆಯಲ್ಲಿ ವೇದಿಕೆ ರೆಡಿ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನಾಳೆ ದಾವಣಗೆರೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದ್ದು, ಇದರಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ ಬೆಂಗಳೂರಿನಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ ಮೋದಿ ಚಾಲನೆ ನೀಡಲಿದ್ದಾರೆ. ಎರಡೂ ಅವರು ರೋಡ್‌ ಶೋ ನಡೆಸಲಿದ್ದಾರೆ.

ದಾವಣಗೆರೆಗೆ ಮೋದಿ ಬರುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ದಾವಣಗೆರೆ ನಗರದಲ್ಲಿ ಎಲ್ಲಾ ಖಾಸಗಿ ಮತ್ತು ಕೆಎಸ್.ಆರ್‌ಟಿಸಿ ಬಸ್‌ಗಳ ಬಸ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ನಗರದ ಹೊರವಲಯಕ್ಕೆ ಸ್ಥಳಾಂತರಿಸಲಾಗಿದೆ. ದಿ.25 ರಂದು ಎಲ್ಲಾ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಿಂದ 2 ಕಿ.ಮೀ. ವ್ಯಾಪ್ತಿ ಸುತ್ತಳತೆಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ.
ಸಮಾರಂಭಕ್ಕೆ ವಿವಿಧ ಕಡೆಗಳಿಂದ ಜನರು ಬರುತ್ತಿದ್ದು, ಆ ವಾಹನಗಳಿಗೆ ಬೇರೆ ಬೇರೆ ಕಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಎಪಿಎಂಸಿ ಮತ್ತು ಚಿಕ್ಕನಹಳ್ಳಿಗಳಲ್ಲಿ ಪಾರ್ಕಿಂಗ್‌

ಚಿಕ್ಕಮಗಳೂರು, ಶಿವಮೊಗ್ಗ, ಭದ್ರಾವತಿ, ಬೀರೂರು,
ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ,
ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ,
ಹಾಸನ, ಕೊಡಗು, ಮಂಗಳೂರು
ಬಾಡಾ ಕ್ರಾಸ್‌ನಿಂದ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳು

ಡಿಆರ್‌ಎಂ, ಹೈಸ್ಕೂಲ್‌, ಯುಟಿಡಿಪಿ ಮೈದಾನದಲ್ಲಿ ಪಾರ್ಕಿಂಗ್‌

ಚನ್ನಗಿರಿ, ಶಿವಮೊಗ್ಗ, ಭದ್ರಾವತಿ, ಬೀರೂರು,
ಕಡೂರು, ಮಂಗಳೂರು ಕಡೆಯಿಂದ
ಹದಡಿ ರಸ್ತೆ ಮೂಲಕ ದಾವಣಗೆರೆ ನಗರಕ್ಕೆ ಪ್ರವೇಶ

ಕುಂದುವಾಡ ಕೆರೆ ಹತ್ತಿರದ ಜಾಗದಲ್ಲಿ ಪಾರ್ಕಿಂಗ್

ಹುಬ್ಬಳ್ಳಿ, ಧಾರಾವಾಡ, ಬೆಳಗಾವಿ,
ಗದಗ, ಹಾವೇರಿ, ಹರಿಹರ ಕಡೆಯಿಂದ ಬೈಪಾಸ್ ರಸ್ತೆ ಮುಖಾಂತರ ಪ್ರವೇಶ

ಕೇಂದ್ರೀಯ ವಿದ್ಯಾಲಯದ ಜಾಗದಲ್ಲಿ ಪಾರ್ಕಿಂಗ್
ಹರಪನಹಳ್ಳಿ-ಬಳ್ಳಾರಿ ವಿಜಯನಗರ ಕೊಪ್ಪಳ,
ವಿಜಯಪುರ, ರಾಯಚೂರು, ಬೀದರ್, ಕಲ್ಬುರ್ಗಿ, ಗದಗ,
ಯಾದಗಿರಿ, ಹೊಸಪೇಟೆ ಕಡೆಯಿಂದ ಬರುವ ವಾಹನಗಳು

ಬಡಗಿ ಕೃಷ್ಣಪ್ಪ ಲೇ ಔಟ್‌ನಲ್ಲಿ ಪಾರ್ಕಿಂಗ್‌

ಚಳ್ಳಕೆರೆ, ಮೊಳಕಾಲ್ಮೂರು, ಕೂಡ್ಲಿಗಿ ಜಿಲ್ಲೆಗಳಿಂದ
ಜಗಳೂರು ರಸ್ತೆ ಮೂಲಕ ಬರುವ ವಾಹನಗಳು

Share Post