ರಾಜ್ಯದಲ್ಲಿ ನೈಟ್ ಕರ್ಪ್ಯೂ ಮುಂದುವರಿಕೆ:ಮತ್ತಷ್ಟು ಬಿಗಿ ನಿಯಮಗಳು
ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಮತ್ತು ಓಮಿಕ್ರಾನ್ ವೈರಸ್ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲಿದೆ. ನಿನ್ನೆ ಕೇಂದ್ರ ಸರ್ಕಾರ ಬೆಂಗಳೂರನ್ನು ರೆಡ್ ಝೋನ್ ಎಂದು ಘೋಷನೆ ಸಹ ಮಾಡಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಜ್ಞರ ಸಭೆಯನ್ನು ಸಹ ಕರೆದಿದೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೊರೊನಾ ತಡೆಗಟ್ಟುವ ಸಲುವಾಗಿ ನೈಟ್ ಕರ್ಪ್ಯೂ ಮುಂದುವರೆಯಲಿದೆ ಎಂದಿದ್ದಾರೆ. ದೀರ್ಘಾವಧಿ ಕ್ರಮದ ಬಗ್ಗೆ ಸಂಪುಡದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ನಾಳೆ ತಜ್ಞರ ಜೊತರ ಸಭೆ ನಡೆಸಿ ಅವರ ಸಲಹೆ ಪಡೆದ ಬಳಿಕ ಗುರುವಾರ ಸಂಪುಟ ಸಭೆಯಲ್ಲಿ ಚರ್ಚಿಸಿ ಮತ್ತಷ್ಟು ಟಫದ್ ರೂಲ್ಸ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಬೆಂಗಳೂರು: ಕೊರೊನಾ ಮೊದಲನೆ, ಎರಡನೇ ಎಲೆ ಆಯ್ತು ಈಗ ಮೂರನೇ ಅಲೆ ರಾಜ್ಯಕ್ಕೆ ಕಾಲಿಟ್ಟಿದ್ಯಾ..? ಎಂಬ ಅನುಮಾನ ಶುರುವಾಗಿದೆ. ಯಾಕಂದ್ರೆ ಸಿಎಂ ಸಭೆ ಮೇಲೆ ಸಭೆ ನಡೆಸಿ ತಜ್ಞರ ಸಲಹೆ ಸ್ವೀಕರಿಸಿ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ತೀರ್ಮಾನ ಮಾಡಿದ್ದಾರೆ. ೩ನೇ ಅಲೆ ರಾಜ್ಯಕ್ಕೆ ಕಾಡುವ ಮೊದಲೇ ನಾವು ಎಚ್ಚೆತ್ತುಕೊಳ್ಳಬೇಕು, ಪಕ್ಕದ ರಾಜ್ಯಗಳಲ್ಲಿ ಕೊರೊನಾ, ಓಮಿಕ್ರಾನ್ ರಣಕೇಕೆ ಹಾಕುತ್ತಿದೆ. ಹಾಗಾಗಿ ಗಡಿಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಹೊರರಾಜ್ಯದಿಂದ ಬಂದವರು ಕೂಡಲೇ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯ ಎಂದಿದ್ದಾರೆ. ಜನರ ಸಹಕಾರ ಇದ್ರೆ ಎಲ್ಲವನನು ನಾವು ನಾವು ಮೆಟ್ಟಿ ನಿಲ್ಲಬಹುದು. ಈಗಷ್ಟೇ ಆರ್ಥಿಕತೆ ಚೇತರಿಸಿಕೊಳ್ಳುತ್ತಿದೆ, ಇದನ್ನು ಗಮನದಲ್ಲಿಟ್ಟುಕೊಂಡು ಕೆಲವೊಂದು ನಿಯಮಗಳನ್ನು ರೂಪಿಸಬೇಕಾಗಿದೆ. ಸೋಂಕು ನಿವಾರಣೆ, ಜನರ ಜೀವನ, ಆರೋಗ್ಯ ಎಲ್ಲವನ್ನೂ ಸಮವಾಗಿ ನಿವಾರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮದಾಗಿದೆ ದಯವಿಟ್ಟು ಜನ ಸಹಕಾರ ಕೊಡಿ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.