ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಎನ್‌ಐಎ ದಾಳಿ; 13ಕ್ಕೂ ಹೆಚ್ಚು ಮಂದಿ ಅರೆಸ್ಟ್
ಬೆಂಗಳೂರು; ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಎನ್‌ಐಎ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು, ಸುಮಾರು 13 ಮಂದಿಯನ್ನು ಬಂಧಿಸಿದ್ದಾರೆ. ಐಸಿಸ್ ಭಯೋತ್ಪಾದನೆ ಸಂಚಿನ ಪ್ರಕರಣದ ಹಿನ್ನೆಲೆಯಲ್ಲಿ ಏಕಕಾಲದಲ್ಲಿ 44 ಸ್ಥಳಗಳಲ್ಲಿ ಈ ದಾಳಿ ನಡೆಸಲಾಗಿದೆ.
ಕರ್ನಾಟಕದಲ್ಲಿ ಒಂದು ಸ್ಥಳದಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಬಂಧಿಸಲಾಗಿದ್ದು, ಆತನಿಂದ 16 ಲಕ್ಷ 42 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಇನ್ನು ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಭಯೋತ್ಪಾದಕ ಸಂಘಟನೆಗಳ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ಈ ತನಿಖೆ ಕೈಗೊಂಡಿದೆ.