ಮಂಗಳೂರಿನಲ್ಲಿ ಯಾಕೆ ಎನ್‌ಐಎ ಕಚೇರಿ ಸ್ಥಾಪಿಸಿಲ್ಲ; ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು; ಮಂಗಳೂರಿನಲ್ಲಿ ಬಿಜೆಪಿ ಸಂಸದರಿದ್ದರೂ ಎನ್‌ಐಎ ಕಚೇರಿ ಸ್ಥಾಪಿಸಲು ಸಾಧ್ಯವಾಗಿಲ್ಲ. ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುತ್ತೇವೆ ಎಂದು ಆಶ್ವಾಸನೆ ನೀಡಿ ವರ್ಷಗಳ ಕಳೆದರೂ ಯಾಕೆ ಎನ್‌ಐಎ ಕಚೇರಿ ಸ್ಥಾಪನೆಯಾಗಿಲ್ಲ ಎಂದು ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಬಗ್ಗೆ ಕಾಂಗ್ರೆಸ್ ಅಧಿಕೃತ ಟ್ವಿಟರ್‌ನಲ್ಲಿ ಟ್ವೀಟ್ ಮಾಡಲಾಗಿದೆ.
‘ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ?, ಬಿಜೆಪಿಯ 25 ಸಂಸದರಿದ್ದೂ ಎನ್‌ಐಎ ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?’
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಯನ್ನು ಸ್ಥಾಪಿಸುತ್ತೇವೆ ಎಂದಿದ್ದ ಬಿಜೆಪಿ ಇಷ್ಟು ವರ್ಷಗಳ ಕಾಲ ಮಾಡಿದ್ದೇನು? ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ? ಬಿಜೆಪಿಯ 25 ಸಂಸದರಿದ್ದೂ NIA ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?
ಎಂದು ಕಾಂಗ್ರೆಟ್ ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.