BengaluruCrime

ಬೆಂಗಳೂರಿನಲ್ಲಿ ಎನ್‌ಐಎಗೆ ಸ್ಫೋಟಕ ತಯಾರಿಗೆ ಬಳಸುವ ಸೋಡಿಯಂ‌ ನೈಟ್ರೇಟ್ ಪತ್ತೆ!

ಬೆಂಗಳೂರು; ಎನ್‌ಐಎ ಅಧಿಕಾರಿಗಳು ಇವತ್ತು ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ. ಜೊತೆಗೆ ಕೇರಳದಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಆಘಾತಕಾರಿ ವಿಷಯ ಅಂದ್ರೆ, ಪರಿಶೀಲನೆ ವೇಳೆ ಬೆಂಗಳೂರಿನ ಮನೆಯೊಂದರಲ್ಲಿ ಸ್ಫೋಟಕಕ್ಕೆ ಬಳಸುವ ವಸ್ತು ಪತ್ತೆಯಾಗಿದೆ.

ಬ್ಯಾಡರಹಳ್ಳಿಯಲ್ಲಿ ಶಮಿವುಲ್ಲಾ ಎಂಬಾತ ವಾಸವಿದ್ದು ಆತನ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಆತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ. ಈ ಬಗ್ಗೆ ಎನ್‌ಐಎ ಅಧಿಕಾರಿಗಳು ಮತ್ತಷ್ಟು ತನಿಖೆ ಚುರುಕುಗೊಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ದಾಳಿ ನಡೆಸಿದಾಗ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಆತನ ತೀವ್ರ ವಿಚಾರಣೆ ನಂತರ ಇಂದು ಮತ್ತೆ ಬೆಂಗಳೂರು ಹಾಗೂ ಬಳ್ಳಾರಿಯ ಹಲವೆಡೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಚ್ಚಿಬೀಳಿಸುವ ಮಾಹಿತಿಗಳು ಹೊರಬೀಳುತ್ತಿವೆ.

 

Share Post