BengaluruPolitics

ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು; ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಿನ್ನೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದರು. ಈ ನಡುವೆ ಯುವ ಘಟಕದ ಅಧ್ಯಕ್ಷರು ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿಯವರು ಪಕ್ಷದ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನಿಖಿಲ್‌ ಕುಮಾರಸ್ವಾಮಿಯವರು ರಾಮನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಆದ್ರೆ ಅವರು ಹೀನಾಯವಾಗಿ ಸೋತಿದ್ದರು. ಈ ಹಿನ್ನೆಲೆಯಲ್ಲಿ ನಿಖೀಲ್‌ ರಾಜೀನಾಮೆ ನೀಡಿದ್ದಾರೆ. ಹೊಸ ನಾಯಕತ್ವಕ್ಕೆ ಅವಕಾಶ ನೀಡವೇಕು ಎಂದು ಅವರು ಹೇಳಿದ್ದಾರೆ. ನಾನು ದೇವೇಗೌಡರು ಹಾಗೂ ಕುಮಾರಸ್ವಾಮಿಯವರ ಮಾರ್ಗದರ್ಶನದಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಭಾಗಿಯಾಗುತ್ತೇನೆ. ಜವಾಬ್ದಾರಿಯನ್ನು ಬೇರೆಯವರಿಗೆ ಕೊಡಿ ಎಂದು ನಿಖೀಲ್‌ ಹೇಳಿದ್ದಾರೆ.

 

Share Post