Bengaluru

ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಇಲ್ಲ; ಗೋವಿಂದ ಕಾರಜೋಳ

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗಿದೆ. ಈಗ ಹೆಚ್ಚುವರಿಯಾಗಿ ನೀಡಲು ಬರುವುದಿಲ್ಲ. ಪರಿಹಾರ ನೀಡಲು ಕಾನೂನಾತ್ಮಕವಾಗಿ ಯಾವುದೇ ಅವಕಾಶ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಅರವಿಂದ್‌ ಕುಮಾರ್‌ ಅವರು ಕಾರಂಜಾ ಮುಳುಗಡೆ ಪರಿಹಾರಕ್ಕೆ ಒತ್ತಾಯಿಸಿ ರೈತರು 80 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಸಚಿವರು, ಈಗಾಗಲೇ 69 ಕೋಟಿ ರೂಪಾಯಿ ಪರಿಹಾರ ನೀಡಿದ್ದೇವೆ. ಇನ್ನೂ ಕೆಲವು ರೈತರು ಕೋರ್ಟ್‌ಗೆ ಹೋಗಿಲ್ಲ. ಕೋರ್ಟ್‌ಗೆ ಹೋಗದೆ ಸರ್ಕಾರಕ್ಕೆ ಅರ್ಜಿ ಹಾಕಿದವರಿಗೂ ಕೂಡ ಪರಿಹಾರ ಕೊಡಲು ಅವಕಾಶ ಇದೆ. ಆದರೆ, ಅವರು ಮೂರು ತಿಂಗಳ ಒಳಗೆ ಅರ್ಜಿ ಹಾಕಿಕೊಂಡಿಲ್ಲ. ಈಗ 25-30 ವರ್ಷದ ನಂತರ ಧರಣಿ ಕೂತರೆ ಕೊಡಲು ಸಾಧ್ಯವಾ ಎಂದು ಪ್ರಶ್ನಿಸಿದರು.

Share Post