Bengaluru

ನಾಯತಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ; ಅರುಣ್‌ ಸಿಂಗ್‌

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ. ಬಸವರಾಜ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಸ್ಪಷ್ಟನೆ ನೀಡಿದ್ದಾರೆ.

 

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿಯವರು ಕಾಮನ್‌ ಮ್ಯಾನ್‌ ಸಿಎಂ. ಅವರು ರಾಜ್ಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು. 2023ರ ವಿಧಾನಸಭಾ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು. ಮುಂದಿನ ಮುಖ್ಯಮಂತ್ರಿ ಕೂಡಾ ಅವರೇ ಆಗಲಿದ್ದಾರೆ ಎಂಬ ವಿಶ್ವಾವನ್ನು ಅರುಣ್‌ ಸಿಂಗ್‌ ವ್ಯಕ್ತಪಡಿಸಿದರು.

 

Share Post