BengaluruPolitics

ಪಕ್ಷ ಸಂಘಟನೆ ಮಾಡದವರಿಗೆ ಪಕ್ಷದಲ್ಲಿ ಸ್ಥಾನವಿಲ್ಲ; ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು; ಪಕ್ಷ ಸಂಘಟನೆಗೆ ದುಡಿಯದ ಪದಾಧಿಕಾರಿಗಳಿಗೆ ಪಕ್ಷದಲ್ಲಿ ಸ್ಥಾನ ಇಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಖಡಕ್‌ ಆಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಸಭೆಯಲ್ಲಿ ಹೆಚ್‍ಡಿಕೆ ಮಾತನಾಡಿದರು. 

ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವ ಪಕ್ಷದಲ್ಲಿ ಜಾಗವಿಲ್ಲ. ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಸಿದರು. ಇದು ಚುನಾವಣೆ ವರ್ಷ, ಎಲ್ಲರೂ ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಹಳೆ ಮೈಸೂರು ಭಾಗ ಮಾತ್ರವಲ್ಲದೆ, ಉತ್ತರ ಕರ್ನಾಟಕ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷ ಬಲವಾಗಿದೆ. ಜನರಲ್ಲಿ ನಮ್ಮ ಪಕ್ಷದ ಬಗ್ಗೆ ಬಹಳ ನಂಬಿಕೆ ಇದೆ. ನಮ್ಮ ಪಕ್ಷದಿಂದ ಒಳ್ಳೆಯದಾಗುತ್ತದೆ ಎನ್ನುವ ವಿಶ್ವಾಸ ಜನರಿಗೆ ಇದೆ. ಇದನ್ನು ಮುಖಂಡರು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಅಂತ ತಿಳಿಸಿದರು.

 

Share Post