Bengaluru

ಧರಣಿ ನಿರತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವಿಲ್ಲ-ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಕಾವೇರಿದ ಹಿಜಾಬ್‌ ಕೇಸರಿ ಸಾಲು ವಿವಾದ, ವಿದ್ಯಾರ್ಥಿಗಳು ರೋಡಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಿಡಿಗೇಡಿಗಳ ಕಲ್ಲುತೂರಾಟಕ್ಕೆ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಪರಿಸ್ಥಿತಿ ಉದ್ವಿಗ್ನ ಹಂತಕ್ಕೆ ತಲುಪಿದೆ. ಈ ಹಿನ್ನೆಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಪ್ರತಿಕ್ರಿಯೆ ನೀಡಿದ್ದು, ಧರಣಿ ನಿರತ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಪ್ರತಿಭಟನೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೆ ಪಿಯು ಮುಖ್ಯ ಪರೀಕ್ಷೆಗೆ ಧರಣಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಇಂದು ಹೈಕೋರ್ಟ್‌ ತೀರ್ಪು ಬರುವವರೆಗೂ ಕಾದು ನೋಡದೆ ಈ ರೀತಿ ಅತಿರೇಕದ ವರ್ತನೆ ಸರಿಯಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

Share Post