BengaluruScienceTechTechnology

ಈಗ ಭಾರತ ಚಂದ್ರನ ಮೇಲಿದೆ; ಖುಷಿ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ಬೆಂಗಳೂರು; ಚಂದ್ರಯಾನ-೩ ಯಶಸ್ವಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಖುಷಿ ವ್ಯಕ್ತಪಡಿಸಿದ್ದಾರೆ. ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ವಿಕ್ರಂ ಲ್ಯಾಂಡರ್‌ ಚಂದ್ರನ ಮೇಲೆ ಇಳಿಯುವ ಪ್ರಕ್ರಿಯೆಯನ್ನು ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ ನಂತರ ದೇಶವನ್ನುದ್ದೇಶಿಸಿ ಮಾತನಾಡಿದರು.

ಐತಿಹಾಸಿಕ ಸಾಧನೆಯಿಂದ ಭಾರತದ ವಿಶ್ವಾಸ ಮತ್ತಷ್ಟು ಹೆಚ್ಚಳವಾಗಿದೆ. ಈಗ ಭಾರತ ಚಂದ್ರನ ಮೇಲಿದೆ. ಈ ವಿಷಯವನ್ನು ಹೇಳಿಕೊಳ್ಳಲು ನನಗೆ ಅತ್ಯಂತ ಹೆಮ್ಮೆಯಾಗುತ್ತದೆ ಎಂದು ಮೋದಿ ಹೇಳಿದ್ದಾರೆ. ಬಾಹ್ಯಾಕಾಶದಲ್ಲಿ ನಾವು ಇತಿಹಾಸ ಸೃಷ್ಟಿಸಿದ್ದೇವೆ. ಇದಕ್ಕಾಗಿ ನಾನು ಭಾರತದ ೧೩೦ ಕೋಟಿ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ. ಇಂದಿನಿಂದ ಚಂದ್ರನ ಬಗೆಗಿನ ಕಥೆಗಳು ಬದಲಾಗುತ್ತವೆ ಎಂದು ಮೋದಿ, ಇಸ್ರೋ ವಿಜ್ಞಾನಿಗಳನ್ನು ಮತ್ತೊಮ್ಮೆ ಶ್ಲಾಘಿಸಿದರು.

 

Share Post