ರಾಜ್ಯದಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆ; ಭಾರತಕ್ಕೂ ದಕ್ಷಿಣ ಆಫ್ರಿಕಾ ತಳಿ ಎಂಟ್ರಿ..!
ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಒಮಿಕ್ರಾನ್ ಸೋಂಕು ಇರುವುದು ಪತ್ತೆಯಾಗಿದೆ. ಇಡೀ ದೇಶದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಸೋಂಕು ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವೇ ಅಧಿಕೃತ ಮಾಹಿತಿ ನೀಡಿದೆ. ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾಕಾದಿಂದ ಹಲವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಅವರಲ್ಲಿ ಇಬ್ಬರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿತ್ತು. ಹೀಗಾಗಿ ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಇಬ್ಬರಿಗೂ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. 66 ಹಾಗೂ 46 ವರ್ಷದ ಇಬ್ಬರಿಗೆ ಒಮಿಕ್ರಾನ್ ಸೋಂಕು ಹರಡಿರುವುದು ದೃಢಪಟ್ಟಿದೆ.
ಹೀಗಾಗಿ ಅಂದು ವಿಮಾನದಲ್ಲಿ ಅವರೊಂದಿಗೆ ಯಾರ್ಯಾರು ಬಂದಿದ್ದರು ಎಂಬುದರ ಮಾಹಿತಿ ಪಡೆಯಲಾಗುತ್ತಿದೆ. ಅವರನ್ನೂ ಪರೀಕ್ಷೆಗೊಳಪಡಿಸಲಾಗುತ್ತದೆ.