Bengaluru

ಬಿಬಿಎಂಪಿಯಿಂದ ಆಪರೇಷನ್‌ ಒತ್ತುವರಿ; 600 ಕಟ್ಟಡಗಳಿಗೆ ನೋಟಿಸ್‌ ಜಾರಿ

ಬೆಂಗಳೂರು; ಮಳೆಯಿಂದಾಗಿ ಬೆಂಗಳೂರಿನಲ್ಲಿ ದೊಡ್ಡ ಅವಾಂತರ ಸೃಷ್ಟಿಯಾಗಿದೆ. ಇದಕ್ಕೆ ರಾಜಕಾಲುವೆಗಳ ಒತ್ತುವರಿಯೇ ಕಾರಣ. ಹೀಗಾಗಿ ಬಿಬಿಎಂಪಿ ಕೊನೆಗೂ ಎಚ್ಚೆತ್ತುಕೊಂಡಿದೆ. ಆಪರೇಷನ್‌ ಒತ್ತುವರಿಗೆ ಮುಂದಾಗಿದೆ. ಬಿಬಿಎಂಪಿಯಿಂದ 600 ಕಟ್ಟಡಗಳಿಗೆ ನೋಟಿಸ್‌ ಕೂಡಾ ನೀಡಲಾಗಿದೆ. 

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರೇ ಮಾಹಿತಿ ನೀಡಿದ್ದಾರೆ. ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡಗಳ ಬಗ್ಗೆ ಪಟ್ಟಿ ಮಾಡಿದ್ದು, 600 ಒತ್ತುವರಿ ಕಟ್ಟಡಗಳ ತೆರವಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ ಕಾರ್ಯ ಮುಂದುವರೆದಿದ್ದು, ಮಹಾದೇವಪುರ ಭಾಗದಲ್ಲಿ ಬಿಬಿಎಂಪಿ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತಿದೆ. ಮಳೆ ಕಡಿಯಾಗಿರುವ ಕಾರಣ, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಈಗಾಗಲೇ ಕೆಲವು ಕಡೆ ಒತ್ತುವರಿ ತೆರವು ಮಾಡಲಾಗಿದೆ. ಇಂದಿನಿಂದ ಪ್ರತಿಷ್ಠಿತ ವಿಲ್ಲಾಗಳ ಬಳಿ ಒತ್ತುವರಿ ತೆರವು ಮಾಡಲಾಗುತ್ತದೆ ಎಂದು ತುಷಾರ್‌ ಅವರು ಹೇಳಿದ್ದಾರೆ.

ಮಳೆ ನೀರು ನಿಂತು ರೈನ್ ಬೋ ಡ್ರೈವ್ ಲೇಔಟ್  ಹೆಚ್ಚು ಸುದ್ದಿಯಾಗಿತ್ತು. ಸದ್ಯ ಕಾಲುವೆ ಒತ್ತುವರಿ ಜಾಗ ತೆರವುಗೊಳಿಸುವಂತೆ ನಗರದ ರೈನ್​ಬೋ ಡ್ರೈವ್​ ಲೇಔಟ್ ವಿಲ್ಲಾಗಳಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ. ಒತ್ತುವರಿ ಜಾಗವನ್ನು ತೆರವು ಮಾಡದಿದ್ರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕೆಂದು, 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್​ ನೋಟಿಸ್​ ಜಾರಿಗೊಳಿಸಿದ್ದಾರೆ. ಮಳೆಯಿಂದ ರೈನ್​ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು.

Share Post