ವಿಪಕ್ಷ ನಾಯಕರು ಬೇಕಾಗಿದ್ದಾರೆ; ಟ್ವೀಟ್ ಮಾಡಿ ಕಾಂಗ್ರೆಸ್ ಲೇವಡಿ
ಬೆಂಗಳೂರು; ಹೊಸ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಹೀಗಾಗಿ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿ ಟ್ವೀಟ್ ಮಾಡಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂಬ ಪೋಸ್ಟರ್ ಜೊತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನು ಲೇವಡಿ ಮಾಡಿದೆ.
ಕಾಂಗ್ರೆಸ್ ಟ್ವೀಟ್ನಲ್ಲೇನಿದೆ..?
ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು ಅಂತಹ ವಿಪಕ್ಷನಾಯಕ ಬೇಕಾಗಿದ್ದಾರೆ.
ಹೀಗಂತ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನು ಆಡಿಕೊಳ್ಳಲಾಗಿದೆ.
ಕಾಂಗ್ರೆಸ್ ಟ್ವೀಟ್ನ ಸಂಪೂರ್ಣ ಸಾರ;
ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ…
* ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
* ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.
* ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
* ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!