ವಿಪಕ್ಷಗಳ ಮಹಾಮೈತ್ರಿ ಸಭೆ; ಸೇವೆಗೆ ಐಎಎಸ್ ಅಧಿಕಾರಿಗಳ ನಿಯೋಜನೆ – ಹೆಚ್ಡಿಕೆ ಆರೋಪ
ಬೆಂಗಳೂರು; ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷಗಳ ಮಹಾಮೈತ್ರಿ ಸಭೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದೆ. ಈ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೊರರಾಜ್ಯಗಳಿಂದ ಆಗಮಿಸಿರುವ ರಾಜಕಾರಣಿಗಳ ಸೇವೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಈ ಬಗ್ಗೆ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಕೂಡಾ ಮಾಡಿದ್ದಾರೆ. ಲೋಕಸಭಾ ಚುನಾವಣೆಗಾಗಿ ಹಲವು ಪಕ್ಷಗಳ ಸಶಭೆ ನಡೆಸುತ್ತಿವೆ. ಇದು ಪಕ್ಷಕ್ಕೆ ಸಂಬಂಧಿಸಿದ ಸಭೆ. ಇದಕ್ಕೂ ಸರ್ಕಾರಕ್ಕೂ ಸಂಬಂಧವಿರುವುದಿಲ್ಲ. ಆದರೂ ಐಎಎಸ್ ಅಧಿಕಾರಿಗಳನ್ನು ಈ ಸಭೆಗೆ ಬಳಸಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕಾರಣಿಗಳ ಸೇವೆಗೆ ಐಎಎಸ್ ಅಧಿಕಾರಿಗಳನ್ನು ಕಳುಹಿಸಿದ್ದು ತಪ್ಪು ಎಂದಿರುವ ಕುಮಾರಸ್ವಾಮಿಯವರು, ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನೆ ಮಾಡಿದ್ದಾರೆ.