ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ನಮ್ಮ ಗುರಿ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು; ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿರುವ ಬಗ್ಗೆ ನಾನೇನೂ ಮಾತನಾಡುವುದಿಲ್ಲ. ಇದು ಕೋರ್ಟ್ ವಿಚಾರ ಎಂದಿರುವ ಡಿ.ಕೆ.ಶಿವಕುಮಾರ್, ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದೇವೆ. ಎರಡು ಗಂಟೆಗಳ ಕಾಲ ಮಾತ್ರ ಬಂದ್ ಮಾಡಲಾಗುತ್ತದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ನಾವು ಬಂದ್ ಮಾಡಿ ಯಾರಿಗೂ ತೊಂದರೆ ಕೊಡುತ್ತಿಲ್ಲ. ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಂದ್ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಇದೇ ವೇಳೆ ತಿಳಿಸಿದರು.