ನಮ್ಮ ಶಾಸಕರಿಗೆ ಯಾವುದೇ ಅಸಮಾಧಾನವಿಲ್ಲ; ಸಿಎಂ, ಡಿಸಿಎಂ
ಬೆಂಗಳೂರು; ಕೆಲ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ ಎನ್ನಲಾಗಿದೆ. ಪತ್ರ ಬರೆದ ಶಾಸಕ ಬಿ.ಆರ್.ಪಾಟೀಲ್ ಹಾಗೂ ಸಹಿ ಹಾಕಿದ ಶಾಸಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಸಖತ್ ಗರಂ ಆಗಿದ್ದರು ಎಂದು ಹೇಳಲಾಗಿದೆ. ಏನಾದರೂ ಸಮಸ್ಯೆ ಇದ್ದರೆ ನನ್ನ ಬಳಿ ಬಂದಿದ್ದರೆ ಪರಿಹಾರ ಮಾಡಿಕೊಡುತ್ತಿದ್ದೆ. ಅದು ಬಿಟ್ಟು ನೇರವಾಗಿ ಪತ್ರ ಬರೆದಿದ್ದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು ಎಂದು ತಿಳಿದುಬಂದಿದೆ.
ಇನ್ನೊಂದೆಡೆ ಸಭೆ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಮಾತನಾಡಿದ್ದಾರೆ. ಮೊದಲಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಲ ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಪತ್ರ ಕೊಟ್ಟಿದ್ದರು. ನಾನೇ ಅದನ್ನು ಲೇಟ್ ಮಾಡಿದ್ದರೆ. ಸಭೆಯಲ್ಲಿ ಕೆಲ ಶಾಸಕರು ವರ್ಗಾವಣೆ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕ್ಷೇತ್ರದ ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಆದ್ರೆ ಯಾರಲ್ಲೂ ಯಾವುದೇ ಅಸಮಾಧಾನವಿಲ್ಲ ಎಂದಿದ್ದಾರೆ.
ಇನ್ನು ಇದೇ ವೇಳೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಮ್ಮ ಎಲ್ಲಾ ಶಾಸಕರೂ ಖುಷಿಯಾಗಿದ್ದಾರೆ. ಯಾರೂ ಕೂಡಾ ಯಾವುದೇ ದೂರು ಕೊಟ್ಟಿಲ್ಲ. ಏನೇ ಅಸಮಾಧಾನ ಅಥವಾ ಸಮಸ್ಯೆಗಳಿದ್ದರೂ ನೇರವಾಗಿ ಬಂದು ಮಾತನಾಡಿ ಎಂದು ಹೇಳಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.