ಮತ್ತೆ ಪಂಚಮಸಾಲಿ ಹೋರಾಟಕ್ಕೆ ಕರೆ; ಮಾರ್ಚ್ 4ರಂದು ರಾಷ್ಟ್ರೀಯ ಹೆದ್ದಾರಿ ತಡೆ
ಬೆಂಗಳೂರು; ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಮತ್ತೆ ಜೋರಾಗುತ್ತಿದೆ. ಮಾ.4ರಂದು ಹೆದ್ದಾರಿ ತಡೆ ನಡೆಸಲು ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲು ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, 48ನೇ ದಿನಕ್ಕೆ ಕಾಲಿಟ್ಟಿದೆ. ಆದ್ರೆ, ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ರಸ್ತೆ ತಡೆ ನಡೆಸಲು ಕರೆ ನೀಡಲಾಗಿದೆ.