Bengaluru

ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರ; ಜೂ.27ಕ್ಕೆ ಸಿಎಂ ಮನೆಗೆ ಮುತ್ತಿಗೆ

ಬೆಂಗಳೂರು; 2ಎ ಮೀಸಲಾತಿಗಾಗಿ ಪಂಚಸಾಲಿ ಹೋರಾಟ ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಇದೇ 27ರಂದು ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಾದಯಾತ್ರೆ ಮಾಡಿದ ವೇಳೆ ಮೀಸಲಾತಿ ನೀಡುವ ಬಗ್ಗೆ ಭರವಸೆ ಸಿಕ್ಕಿತ್ತು. ಆದ್ರೆ ಇದುವರೆಗೂ ಅದು ಅನುಷ್ಠಾನವಾಗಿಲ್ಲ. ಹೀಗಾಗಿ, ಹೋರಾಟವನ್ನು ನಾವು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹೋರಾಟವನ್ನು ತೀವ್ರಗೊಳಿಸುತ್ತೇವೆ. ಜೂನ್‌ 27ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿರುವ ಸಿಎಂ ಬೊಮ್ಮಾಯಿ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ಅಂದು ಸಿಎಂ ಮನೆಗೆ ಬೀಗ ಜಡಿಯಲು ತೀರ್ಮಾನಿಸಿದ್ದೇವೆ ಎಂದು ಸ್ವಾಮೀಜಿ ಹೇಳಿದ್ದಾರೆ.

 

Share Post