BengaluruPolitics

25 ಕ್ಷೇತ್ರಗಳಿಗೆ ಪರಿಷತ್‌ ಚುನಾವಣೆ; ಭರದಿಂದ ಸಾಗಿದ ಮತದಾನ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ  ರಾಜ್ಯ ವಿಧಾನಪರಿಷತ್ತಿನ 25 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಸೇರಿ ಒಟ್ಟು 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಪಕ್ಷಗಳ ಅಧಿಕೃತ ಅಭ್ಯರ್ಥಿಗಳ ಪೈಕಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಕಣದಲ್ಲಿರುವ ಏಕೈಕ ಮಹಿಳೆ. ರಾಜ್ಯದಲ್ಲಿ ಒಟ್ಟು 98,846 ಮತದಾರರಿದ್ದಾರೆ. ಬೆಳಗ್ಗೆ 8 ರಿಂದ ಮತದಾನ ಶುರುವಾಗಿದ್ದು, ಸಂಜೆ 4ಗೆ ಮುಗಿಯಲಿದೆ. ರಾಜ್ಯದಾದ್ಯಂತ 6,073 ಮತಗಟ್ಟೆಗಳನ್ನು ತೆರೆಯಲಾಗಿದೆ. ಶಾಸಕರು, ಸಂಸದರು, ಪಟ್ಟಣ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಮತದಾನ ಮಾಡಲಿದ್ದಾರೆ. ಡಿಸೆಂಬರ್ 14ರಂದು ಮತ ಎಣಿಕೆ ನಡೆಯಲಿದೆ.

ಬೆಳಗ್ಗೆಯೇ ಹಲವು ಗಣ್ಯರು ಮತಗಟ್ಟೆಗೆ ಬಂದು ಚಲಾಯಸಿದ್ದಾರೆ. ಬೆಳಗಾವಿಯಲ್ಲಿ ಸಂಸದೆ ಮಂಗಳಾ ಅಂಗಡಿ ಮತ ಚಲಾಯಿಸಿದರು. ಇನ್ನೊಂದೆಡೆ ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಬರಿಗಾಲಲ್ಲಿ ಬಂದು ಮತ ಚಲಾವಣೆ ಮಾಡಿದರು. ಇಲ್ಲಿ ಅವರ ಕಿರಿಯ ಪುತ್ರ ಸೂರಜ್‌ ಜೆಡಿಎಸ್‌ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಇನ್ನು ಹಾವೇರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಲೀಂ ಅಹಮದ್‌ ಕೂಡಾ ತಮ್ಮ ಹಕ್ಕು ಚಲಾಯಿಸಿದರು.

Share Post